ಕ್ರಿಶ್ಚಿಯನ್ ಧರ್ಮ
ಹಿಂದೆ

ಮತ್ತಾಯನು 19

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.

2ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.

3ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,

4ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’

6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.

7ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

8ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.

9ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.

10ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.

11ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.

12ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.

13ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

14ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

15ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.

16ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

17ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.

18ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.

19ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.

20ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.

21ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

22ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

23ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

24“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

25ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.

26ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

27ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.

28ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

29ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

30ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath