ಮತ್ತಾಯನು 28
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
2ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
3ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
4ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
5ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
6ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
7ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
8ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
9ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
10ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
11ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
12ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
13“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
14ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
15ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath