ಕ್ರಿಶ್ಚಿಯನ್ ಧರ್ಮ
ಹಿಂದೆ

ಮೀಕನು 3

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

2ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.

3ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

4ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”

5ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

6“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.

7ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.

8ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.

9ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,

10ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.

11ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

12ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath