ಕ್ರಿಶ್ಚಿಯನ್ ಧರ್ಮ
ಹಿಂದೆ

ಮಾರ್ಕನು 13

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.

2ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.

3ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,

4ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.

5ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

6ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

7ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

8ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.

9“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,

10ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.

11“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,

12ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,

13ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

14“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

15ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.

16ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.

17“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!

18ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.

19ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.

20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.

21“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.

22ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

23ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.

24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.

25ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’

26ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

28“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.

29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.

30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

32“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.

33ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.

34ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

35“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!

36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.

37ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath