ಕ್ರಿಶ್ಚಿಯನ್ ಧರ್ಮ
ಹಿಂದೆ

ಮಾರ್ಕನು 3

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.

2ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.

3ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.

4ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.

5ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

6ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

7ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.

8ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.

10ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

11ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.

12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.

13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.

14ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,

15ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.

16ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.

17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.

18ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,

19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.

20ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.

21ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.

22ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.

23ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?

24ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;

25ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.

26ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.

27ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.

28ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

29ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.

30ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.

31ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.

32ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.

33ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,

34“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.

35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath