ಕ್ರಿಶ್ಚಿಯನ್ ಧರ್ಮ
ಹಿಂದೆ

ನಹೂಮನು 1

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.

2ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

3ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.

4ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.

5ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

6ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

7ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.

8ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

9ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.

10ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.

11ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.

12ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.

13ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”

14ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.

15ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath