ನಹೂಮನು 3
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ.
2ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,
3ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.
4ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.
5ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.
6ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು.
7ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.
8ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.
9ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು.
10ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.
11ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.
12ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.
13ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.
14ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.
15ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ,
16ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ.
17ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.
18ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.
19ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath