ಅರಣ್ಯಕಾಂಡ 17
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
2“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
3ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
4ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
5ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
6ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
7ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
8ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
9ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
10ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.
11ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
12ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
13ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath