ಅರಣ್ಯಕಾಂಡ 1
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
2“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
3ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
4ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
5ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
6ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
7ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
10ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
12ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
16ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.
17ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
18ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
19ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.
20ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
21ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
22ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
23ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
24ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
25ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
26ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
27ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
28ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
29ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
30ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
31ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
32ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
33ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
34ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
35ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
36ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
37ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
38ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
39ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
40ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
41ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
42ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
43ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
44ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
45ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
46ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
47ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
48ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
49“ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
50ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
51ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
53ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
54ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath