ಅರಣ್ಯಕಾಂಡ 27
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
2ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
3“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
4ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
5ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.
6ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
7“ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
8“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
9ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
10ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.
11ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
12ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
13ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
14ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
15ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
16“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
17ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.
18ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,
19ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
20ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.
21ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
22ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
23ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath