ಅರಣ್ಯಕಾಂಡ 36
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
2“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
3ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
4ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
5ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
6ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
7ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
8ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
9ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
10ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
11ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
12ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
13ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath