ಕ್ರಿಶ್ಚಿಯನ್ ಧರ್ಮ
ಹಿಂದೆ

ಅರಣ್ಯಕಾಂಡ 8

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:

2“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.

3ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.

4ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.

5ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

6“ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.

7ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.

8ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.

9ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.

10ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.

11ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

12“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

13ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.

14ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

15“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.

16ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.

17ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.

18ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.

19ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

20ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.

21ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

22ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

23ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

24“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.

25ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.

26ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath