ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 10

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.

2ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.

3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.

4ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.

5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.

6ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.

7ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.

8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.

9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.

10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.

11ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.

12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

13ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.

14ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.

15ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.

16ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.

17ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

18ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.

19ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.

20ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.

21ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.

22ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.

23ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.

24ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.

25ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.

26ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.

27ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.

28ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.

29ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

30ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.

31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.

32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath