ಜ್ಞಾನೋಕ್ತಿಗಳು 12
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
2ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
3ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
4ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
5ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
6ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
7ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
8ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
9ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
10ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
11ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
12ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
13ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
14ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
15ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
16ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
17ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
18ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
19ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
21ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
22ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
23ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
25ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
26ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
27ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
28ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath