ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 13

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.

2ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.

3ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.

4ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.

5ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.

6ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.

7ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.

8ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

9ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.

10ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.

11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.

12ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.

14ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.

15ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.

16ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

17ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.

18ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.

19ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.

20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

21ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.

22ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.

23ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.

24ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.

25ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath