ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 14

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.

2ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.

3ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.

4ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.

5ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.

6ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.

7ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.

8ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

9ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.

10ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.

11ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.

12ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

13ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.

14ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.

15ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

16ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.

17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

18ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.

19ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

20ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.

21ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.

22ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.

23ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.

24ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.

25ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.

26ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.

27ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.

28ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.

29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.

30ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.

31ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

32ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

33ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.

34ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

35ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath