ಜ್ಞಾನೋಕ್ತಿಗಳು 21
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
2ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
3ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
4ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
5ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
6ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
7ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
8ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
12ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
13ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
14ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
15ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
16ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
17ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
18ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
19ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
20ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
21ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
23ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
24“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
25ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
26ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
27ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
28ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
29ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
30ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
31ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath