ಜ್ಞಾನೋಕ್ತಿಗಳು 23
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.
2ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
3ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
6ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
7ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
16ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
17ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
18ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
19ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
20ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
21ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
22ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
23ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
24ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
25ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
26ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
27ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.
28ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
29ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
30ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
31ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
32ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
33ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
34ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.
35ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath