ಜ್ಞಾನೋಕ್ತಿಗಳು 24
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
2ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
3ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
5ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
6ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
7ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
8ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
9ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
11ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
12“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
13ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
14ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
15ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
16ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
17ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
18ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
19ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
20ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.
21ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
22ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
23ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
24ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
25ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
26ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
27ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
29“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
30ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
31ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
32ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
33ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
34ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath