ಜ್ಞಾನೋಕ್ತಿಗಳು 25
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.
2ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.
3ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ.
4ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.
5ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.
6ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
7ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
8ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
9ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
10ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
12ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
13ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
14ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.
15ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
16ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
17ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
18ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
19ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
20ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.
21ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
22ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
23ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
24ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
25ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
26ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
27ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.
28ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath