ಜ್ಞಾನೋಕ್ತಿಗಳು 26
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
2ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
3ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
4ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
5ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
7ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
8ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
12ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
14ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
15ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
18ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
19ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
20ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
21ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
22ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
23ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
24ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
25ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
26ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
27ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.
28ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath