ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 27

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.

2ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.

3ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.

4ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?

5ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.

6ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.

7ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.

8ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.

9ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

10ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

11ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.

12ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

13ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.

14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.

15ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.

16ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.

17ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.

18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.

19ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.

20ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

21ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.

22ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.

23ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.

24ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

25ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.

26ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.

27ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath