ಜ್ಞಾನೋಕ್ತಿಗಳು 28
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
2ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
3ಬಡವರನ್ನು ಹಿಂಸಿಸುವ ದರಿದ್ರನು , ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
4ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
5ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
6ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
7ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
8ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
12ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
14ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
15ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
23ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.
24ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
25ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
26ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath