ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 29

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

2ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.

3ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

4ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

5ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.

6ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.

7ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.

8ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.

9ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.

10ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.

11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.

12ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.

13ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

14ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

15ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.

16ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

17ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.

18ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

19ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.

20ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.

21ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.

22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.

23ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.

24ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.

25ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.

26ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.

27ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath