ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 30

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ , ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.

2ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.

3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.

4ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

5ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.

6ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.

7ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.

8ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

9ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.

10ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.

11ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.

12ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.

13ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.

14ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.

15ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

16ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.

17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

18ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;

19ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.

20ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.

21ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.

22ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,

23ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.

24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.

25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.

26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.

27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.

28ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.

29ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.

30ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,

31ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.

32ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.

33ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath