ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 3

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.

2ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

3ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

4ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

7ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

8ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.

9ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

10ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

11ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

12ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.

13ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.

14ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.

15ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.

17ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.

18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

19ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.

20ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.

21ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

22ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.

23ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.

24ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.

25ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

26ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.

27ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.

28ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.

29ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?

30ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.

31ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.

32ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.

33ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.

34ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.

35ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath