ಕ್ರಿಶ್ಚಿಯನ್ ಧರ್ಮ
ಹಿಂದೆ

ಜ್ಞಾನೋಕ್ತಿಗಳು 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.

2ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.

3ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.

4ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.

5ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.

6ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.

7ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.

8ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!

9ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.

10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.

11ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,

12“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,

13ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!

14ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.

15ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.

16ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?

17ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.

18ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.

19ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.

20ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?

21ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

22ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.

23ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath