ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 100

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.

2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.

3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.

4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.

5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath