ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 101

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

2ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

3ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

4ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.

5ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

6ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

7ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

8ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath