ಕೀರ್ತನೆಗಳು 103
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
2ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
5ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
6ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
7ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
8ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
9ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
12ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
13ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
16ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
18ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
19ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
20ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
21ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
22ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath