ಕೀರ್ತನೆಗಳು 107
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
2ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
3ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
4ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
5ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
6ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
7ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
8ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
9ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
10ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
11ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
12ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
13ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
14ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
15ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
16ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
17ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
18ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
19ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
20ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
21ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
22ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
23ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
24ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
25ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
26ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
27ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
28ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
29ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
30ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
31ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
32ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
33ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
34ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
35ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
36ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
37ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
38ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
39ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
40ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
41ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
42ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
43ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath