ಕೀರ್ತನೆಗಳು 108
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
2ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
3ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
4ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
7ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
8ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
9ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
10ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
11ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?
12ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
13ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath