ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 109

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.

2ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.

3ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

4ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

5ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

6ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

7ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.

8ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.

9ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.

10ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.

11ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.

12ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,

13ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

14ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

15ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.

16ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

17ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

18ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.

19ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.

20ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.

21ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.

22ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

23ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.

24ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.

25ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.

26ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.

27ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.

28ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.

29ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

30ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

31ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath