ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 110

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.

4“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

5ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

6ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

7ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath