ಕೀರ್ತನೆಗಳು 111
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
3ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.
4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
5ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
6ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
9ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
10ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath