ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 112

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.

3ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

4ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

5ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

6ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.

7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.

8ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.

9ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

10ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath