ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 115

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.

2“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?

3ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.

4ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

5ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.

6ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.

7ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.

8ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

9ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.

10ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.

11ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.

12ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.

13ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.

14ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;

15ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.

16ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

17ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.

18ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath