ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 116

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.

2ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.

3ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.

4ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.

5ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.

6ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

7ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.

8ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,

9ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

10“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,

11“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.

12ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?

13ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

14ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.

15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.

16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.

17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,

19ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath