ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 118

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.

2ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

3ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

4ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

5ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.

6ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?

7ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.

8ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

9ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

10ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.

11ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.

12ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.

13ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.

14ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

15ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

16ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

17ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.

18ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.

19ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.

20ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.

21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.

22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

23ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.

24ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.

25ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.

26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.

27ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

28ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.

29ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath