ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 11

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?

2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.

3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?

4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath