ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 121

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

2ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.

3ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.

5ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.

6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.

7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

8ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath