ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 124

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.

2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,

3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;

5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”

6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.

7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath