ಕೀರ್ತನೆಗಳು 127
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
4ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
5ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath