ಕೀರ್ತನೆಗಳು 128
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
6ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath