ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 12

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

4ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

5ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

6ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

8ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath