ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 130

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

2ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.

3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

4ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

5ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.

6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath