ಕೀರ್ತನೆಗಳು 132
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
2ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
3“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
4ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
5ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
6ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
7“ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
8ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
9ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
10ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
13ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
14ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
15ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
16ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.
17ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
18ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath