ಕೀರ್ತನೆಗಳು 135
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
2ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
3ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.
4ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
5ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
11ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
12ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
13ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
14ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.
15ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
16ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,
17ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
18ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
19ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
20ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
21ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath