ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 136

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

2ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

3ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

4ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.

5ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

6ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

7ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

8ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

9ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.

10ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

11ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

12ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

13ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

14ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

16ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

17ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.

18ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

19ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.

20ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.

21ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

22ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.

23ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.

24ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

25ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.

26ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath