ಕೀರ್ತನೆಗಳು 144
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
3ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
4ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
5ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
6ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
7ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
8ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
11ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
12ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
13ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
14ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
15ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath